ಪೊಕ್ಸೊ ಪ್ರಕರಣ:ಮುರುಘಾ ಶ್ರೀ ನಿರ್ದೋಷಿ

 

ಚಿತ್ರದುರ್ಗ, ನ.29- ಫೊಕ್ಸೊ ಪ್ರಕರಣ ಕುರಿತಂತೆ ಮುರುಘಾ಼ ಶ್ರೀ ನಿರ್ದೋಷಿ ಎಂದು ಜಿಲ್ಲಾ ನ್ಯಾಯಾಲಯ  ಮಹತ್ವದ ತೀರ್ಪು ನೀಡಿದೆ. ಇದರಿಂದಾಗಿ ಶ್ರೀಗಳು ನಿರಾಳರಾಗಿದ್ದಾರೆ.

ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.3 ವರ್ಷಗಳ ಸುದೀರ್ಘ ತನಿಖೆ ಬಳಿಕ ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದ ನ್ಯಾ.ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರಿದ್ದ ಪೀಠ ನಿರ್ದೋಷಿ ಎಂದು ಅಂತ ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಮೊದಲ ಪ್ರಕರಣ ಶ್ರೀಗಳು ಖುಲಾಸೆಗೊಂಡಂತಾಗಿದೆ.ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು.ಆ.27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, 2022ರ ಸೆ.01 ರಂದು ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಬಂಧನಕ್ಕೊಳ ಗಾಗಿದ್ದರು. ಬಳಿಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅ.13 ರಂದು ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಾಗಿತ್ತು. ಆ ಕೇಸಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿಯೂ ಎಂದು ಕೂಡ ಉಲ್ಲೇಖಿಸಿದ್ದರು.2023ರ ಜ.10ರಂದು ದಾಖಲಾದ 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು 761 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.ಸಾಕ್ಷ್ಯಾಧಾರ ಹಾಗೂ ಚಾರ್ಜ್‌ ಶೀಟ್‌ ಮೇಲೆ ಚಿತ್ರದುರ್ಗ ನ್ಯಾಯಾಲಯ ವಿಚಾರಣೆ ನಡೆಸಿತ್ತು. ವಿಚಾರಣೆ ನಡೆಯುವಾಗಲೇ 2023ರ ನ.8 ರಂದು ಹೈಕೋರ್ಟ್ ನಿಂದ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ನ.16ರಿಂದು ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದರು.

Related Articles

Leave a Reply

Your email address will not be published. Required fields are marked *

Back to top button