1 ಲಕ್ಷ ಲಂಚಕ್ಕೆ ಡಿಮ್ಯಾಂಡ್ : ರೆಡ್​ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್​ಪೆಕ್ಟರ್!

ಸ್ನೇಹಜೀವಿ ನ್ಯೂಸ್

ಯಾದಗಿರಿ : ಸುಮಾರು 1 ಲಕ್ಷ ರೂ. ಲಂಚ ಪಡೆಯುವಾಗ ಇನ್ಸ್‌ಪೆಕ್ಟರ್ ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಕ್ರಿಮಿನಲ್ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಹಣಕ್ಕೆ ಬೇಡಿಕೆಯಿಟ್ಟಿದ್ದ. ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಗುರುಮಠಕಲ್ ತಾಲೂಕಿನ ಗೋಪಾಳಪುರ ಗ್ರಾಮದ ಆನಂದ್ ಎಂಬುವವರ ವಿರುದ್ಧ ಜಾತಿ ನಿಂದನೆ ಪ್ರಕರಣವೊಂದು ದಾಖಲಾಗಿತ್ತು. ಈ ಕೇಸ್​ನಲ್ಲಿ ಅವರನ್ನು ಬಂಧಿಸದೆ ಇರಲು ಮತ್ತು ಇನ್ನೊಂದು ಕೇಸ್‌ನಲ್ಲಿ ಅವರ ಹೆಸರನ್ನು ಕೈಬಿಡಲು ಪಿಐ ವೀರಣ್ಣ ದೊಡ್ಡಮನಿ ಅವರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆನಂದ್ ದೂರು ನೀಡಿದ್ದಾರೆ. ಈ ಎರಡು ಪ್ರಕರಣಗಳ ಇತ್ಯರ್ಥಕ್ಕಾಗಿ ಒಟ್ಟು ಒಂದು ಲಕ್ಷ ರೂಪಾಯಿ ಹಣವನ್ನು ಪಡೆಯುವ ಒಪ್ಪಂದವಾಗಿತ್ತು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಶುಕ್ರವಾರ ರಾತ್ರಿ ಗುರುಮಠಕಲ್ ಪಟ್ಟಣದ ಸಿಪಿಐ ಕ್ವಾಟರ್ಸ್‌ನಲ್ಲಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಡಿವೈಎಸ್‌ಪಿ ಜಾಕೀರ್ ಇನಾಂದಾರ್ ಅವರ ನೇತೃತ್ವದ ತಂಡ  ದಾಳಿ ನಡೆಸಿದೆ. ಸದ್ಯ ಆರೋಪಿ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿಯನ್ನು ವಶಕ್ಕೆ ಪಡೆಯಲಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Related Articles

Leave a Reply

Your email address will not be published. Required fields are marked *

Back to top button