ಗದಗದಲ್ಲಿ ಸೆ.13ರಂದು ಐಎಂಎ ಶತಮಾನೋತ್ಸವ ಸಂಭ್ರಮ

ಶತಮಾನೋತ್ಸವದ ಅಂಗವಾಗಿ ಜಿಲ್ಲೆಯ 100 ಶಾಲೆಗಳಿಗೆ ಚಿಕಿತ್ಸಾ ಪೆಟ್ಟಿಗೆಗಳನ್ನು ವಿತರಿಸಲಾಗುವುದು.

ಸ್ನೇಹಜೀವಿ ನ್ಯೂಸ್
ಗದಗ : ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಸಂಭ್ರಮವನ್ನು .13ರ೦ದು ಗದಗ ನಗರದ ಕೆ ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಲಾಗಿದೆ. ಎಂದು ಐಎಂಎ ಡಾ. ಶ್ರೀಧರ ಕುರಡಗಿ ತಿಳಿಸಿದರು.
ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ಎಸ್‌.ವಿ. ಸಂಕನೂರ, ಡಾ. ಆರ್.ವಿ. ಅಶೋಕನ್ ಹಾಗೂ ಡಾ.ವೀರಭದ್ರಯ್ಯ ಟಿ.ಎ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಶಾಸಕ ಡಾ. ಎಚ್.ಕೆ.ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

 

ಶತಮಾನೋತ್ಸವದ ಅಂಗವಾಗಿ ಜಿಲ್ಲೆಯ 100 ಶಾಲೆಗಳಿಗೆ ಚಿಕಿತ್ಸಾ ಪೆಟ್ಟಿಗೆಗಳನ್ನು ವಿತರಿಸಲಾಗುವುದು.

ಈಗಾಗಲೇ ಮಹಿಳಾ ವೈದ್ಯರ ತಂಡ ಹಲವು ಶಾಲಾ ಆರೋಗ್ಯದ ಕುರಿತು ಮಾಹಿತಿ ಹಾಗೂ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದೆ ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button