ಚುನಾವಣಾ ಆಯೋಗದ ಇತ್ತೀಚಿನ ಬೆಳವಣಿಗೆಗಳು ಕುರಿತು;ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರನ್ನು ಕೂಡಲೇ ವಜಾಗೊಳಿಸಬೇಕು, ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಬೇಕು

ಚುನಾವಣಾ ಆಯೋಗದ ಇತ್ತೀಚಿನ ಬೆಳವಣಿಗೆಗಳು ಹಾಗೂ ಅದರ ಕಾರ್ಯವೈಖರಿ ಕುರಿತು ದೇಶದ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವವರಲ್ಲಿ ಆತಂಕ ಮೂಡಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರನ್ನು ಕೂಡಲೇ ವಜಾಗೊಳಿಸುವುದರ ಜೊತೆಗೆ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸುತ್ತೇನೆ.c

 

    ಚುನಾವಣಾ ಆಯೋಗದ ಇತ್ತೀಚಿನ ಬೆಳವಣಿಗೆಗಳು ಹಾಗೂ ಅದರ ಕಾರ್ಯವೈಖರಿ ಕುರಿತು ದೇಶದ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವವರಲ್ಲಿ ಆತಂಕ ಮೂಡಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರನ್ನು ಕೂಡಲೇ ವಜಾಗೊಳಿಸುವುದರ ಜೊತೆಗೆ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸುತ್ತೇನೆ.
ಚುನಾವಣಾ ಆಯೋಗ ಒಂದು ಸಂವಿಧಾನಾತ್ಮಕ ಸಂಸ್ಥೆ. ಸಂವಿಧಾನದ ಆಶಯದಂತೆ ಅದು ಚುನಾವಣೆಗಳನ್ನು ಸ್ವತಂತ್ರವಾಗಿ, ನಿಷ್ಪಕ್ಷಪಾತವಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕಾಗುತ್ತದೆ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಗಳು ನ್ಯಾಯಸಮ್ಮತವಾಗಿ ನಡೆಯುವುದು ಪ್ರಜಾಪ್ರಭುತ್ವದ ಮೂಲಭೂತ ಅಗತ್ಯ. ಚುನಾವಣಾ ಆಯೋಗ ಸ್ವತಂತ್ರವಾಗಿ ಕಾರ್ಯನಿರ್ವಹಿಸದಿದ್ದರೆ ಪ್ರಜಾಪ್ರಭುತ್ವವೇ ಉಳಿಯುವುದಿಲ್ಲ. ಇದು ಪ್ರಜಾಪ್ರಭುತ್ವದ ಅಳಿವು-ಉಳಿವಿನ ಪ್ರಶ್ನೆಯಾಗಿದೆ.
ಚುನಾವಣಾ ಆಯೋಗದ ಸದಸ್ಯರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಸಾಬೀತಾದರೆ, ಅವರ ವಿರುದ್ಧ ಸಂವಿಧಾನಬದ್ಧ ಕ್ರಮ ಜರುಗಿಸಬೇಕು. ಸಂವಿಧಾನದ ರಕ್ಷಣೆಯ ಜವಾಬ್ದಾರಿ ಹೊಂದಿರುವ ರಾಷ್ಟ್ರಪತಿಗಳು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕು. ಮುಖ್ಯ ಚುನಾವಣಾ ಆಯುಕ್ತರು ಅಥವಾ ಚುನಾವಣಾ ಆಯುಕ್ತರು ಯಾವುದೇ ಕಾರಣಕ್ಕೂ ಸರ್ವಾಧಿಕಾರಿ ಧೋರಣೆಯಿಂದ ಕಾರ್ಯನಿರ್ವಹಿಸಲು ಸಂವಿಧಾನ ಅವಕಾಶ ನೀಡುವುದಿಲ್ಲ.
ಚುನಾವಣಾ ಆಯೋಗವು ಯಾವುದೇ ಸರ್ಕಾರಕ್ಕೆ ಅಥವಾ ರಾಜಕೀಯ ಪಕ್ಷಕ್ಕೆ ನಿಷ್ಠವಾಗಿರಬೇಕಾದ ಸಂಸ್ಥೆಯಲ್ಲ. ಬಾಬಾಸಾಹೇಬ್‌ ಡಾ. ಬಿ.ಆರ್. ಅಂಬೇಡ್ಕರ್‌ ಅವರು ನೀಡಿದ ಸಂವಿಧಾನಕ್ಕೆ ಮಾತ್ರ ಅದು ನಿಷ್ಠವಾಗಿರಬೇಕು. ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುವ ಸಂಸ್ಥೆಯಾಗಿ ಚುನಾವಣಾ ಆಯೋಗ ಇರಬಾರದು.
ಪ್ರಸ್ತುತ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಸೇರಿದಂತೆ ಮೂವರು ಸದಸ್ಯರಿದ್ದಾರೆ. ಆದರೆ, ಈ ಮೂವರ ಪೈಕಿ ಇಬ್ಬರು ಚುನಾವಣಾ ಆಯುಕ್ತರು ಹಲವು ನಿರ್ಧಾರಗಳ ಕುರಿತು ಲಿಖಿತವಾಗಿ ಆಕ್ಷೇಪ ವ್ಯಕ್ತಪಡಿಸಿರುವುದು ಮಾಧ್ಯಮ ವರದಿಗಳಿಂದ ಬಹಿರಂಗವಾಗಿದೆ. ಪತ್ರಿಕೆಯೊಂದು ನಡೆಸಿದ ತನಿಖಾ ವರದಿ ಪ್ರಕಾರ,

ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು ವಿವೇಕ್‌ ಜೋಶಿ ಅವರು ಕಳೆದ ಹತ್ತು ತಿಂಗಳಲ್ಲಿ ಕನಿಷ್ಠ 14 ಬಾರಿ ಆಯೋಗದ ನಿರ್ಧಾರಗಳು ಮತ್ತು ಆದೇಶಗಳ ಕುರಿತು ಆಕ್ಷೇಪ ದಾಖಲಿಸಿದ್ದಾರೆ. ಕೆಲವು ಆಕ್ಷೇಪಗಳು ಮತದಾರರ ಸೇರ್ಪಡೆ, ಹೆಸರುಗಳ ಅಳಿಸುವಿಕೆ, ಫಾರಂ-6 ಬದಲಾವಣೆ ಹಾಗೂ ಮತದಾರರ ದತ್ತಾಂಶ ನಿರ್ವಹಣೆಗೆ ಸಂಬಂಧಿಸಿದ್ದಾಗಿವೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಸರ್ವಾಧಿಕಾರದ ಧೋರಣೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಚುನಾವಣಾ ಆಯೋಗದೊಳಗೇ ಈ ರೀತಿಯ ಆಕ್ಷೇಪಗಳು ವ್ಯಕ್ತವಾಗಿರುವುದು ಗಂಭೀರ ವಿಚಾರ. ಸಂವಿಧಾನಾತ್ಮಕ ಸಂಸ್ಥೆಯೊಳಗೆ ಇಂತಹ ಬೆಳವಣಿಗೆ ನಡೆಯಬಾರದು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತಗಳ್ಳತನ ಮತ್ತು ಮತದಾರರ ಪಟ್ಟಿಯನ್ನು ತಿರುಚುವ ಪ್ರಕ್ರಿಯೆಗಳು ವ್ಯಾಪಕವಾಗಿ ನಡೆಯುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ

ಹಲವು ಬಾರಿ ಆರೋಪಿಸಿದ್ದಾರೆ. ಈ ಕುರಿತು 2025ರಲ್ಲಿಯೇ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಮತಗಳ್ಳತನದ ಆರೋಪಗಳನ್ನು ರಾಹುಲ್‌ ಗಾಂಧಿ ಅವರು ಮುಂದಿಟ್ಟಾಗ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರು ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ಹೇಳಿದ್ದರು.
ಮುಖ್ಯ ಚುನಾವಣಾ ಆಯುಕ್ತ

ರನ್ನು ವಜಾಗೊಳಿಸುವ ಕುರಿತು ಸಂವಿಧಾನದ 324ನೇ ವಿಧಿ ವಿಶೇಷ ರಕ್ಷಣೆಯನ್ನು ಒದಗಿಸುತ್ತದೆ. ಅದರ ಪ್ರಕಾರ ಮುಖ್ಯ ಚುನಾವಣಾ ಆಯುಕ್ತರನ್ನು ಸುಪ್ರೀಂ

ಕೋರ್ಟ್‌ ನ್ಯಾಯಮೂರ್ತಿಯನ್ನು ವಜಾಗೊಳಿಸುವ ರೀತಿಯಲ್ಲೇ ಮತ್ತು ಅದೇ ಆಧಾರದ ಮೇಲೆ ವಜಾಗೊಳಿಸಬಹುದು. ಇತರ ಚುನಾವಣಾ ಆಯುಕ್ತರ ವಜಾಕ್ಕೆ ಮುಖ್ಯ ಚುನಾವಣಾ ಆಯುಕ್ತರ ಶಿಫಾರಸು ಅಗತ್ಯವಿದೆ.
ನರೇಂದ್ರ ಮೋದಿ ಅವರಿಗೆ 75 ವರ್ಷ ವಯಸ್ಸಾಗಿದೆ. ಇತರರಿಗೆ 75 ವರ್ಷವಾದ ಬಳಿಕ ನಿವೃತ್ತಿಯ ವಿಚಾರವನ್ನು ಮುಂದಿಡಲಾಗುತ್ತದೆ. ಆದರೆ ನರೇಂದ್ರ ಮೋದಿ ಅವರಿಗೆ ಮಾತ್ರ ಇದರಿಂದ ವಿನಾಯಿತಿ ನೀಡಲಾಗಿದೆ. ಮೋದಿ ಅವರು ನಿಷ್ಪಕ್ಷಪಾತವಾಗಿ ಪ್ರಧಾನಮಂತ್ರಿಯಾಗಿಲ್ಲ, ಮತಗಳ್ಳತನದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿರುವ ಪ್ರಧಾನಮಂತ್ರಿಗೆ ಒಂದು ನಿಮಿಷವೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ.
ಈ ಕಾರಣಕ್ಕಾಗಿ ಪ್ರತಿಭಟನೆ ನಡೆಸುವುದು ಮತ್ತು ಇದನ್ನು ಖಂಡಿಸುವುದು ಅಗತ್ಯವಾಗಿದೆ. ನಾನು ಕೂಡ ರಾಹುಲ್‌ ಗಾಂಧಿ ಅವರೊಂದಿಗೆ ನಿಂತು ಈ ಹೋರಾಟವನ್ನು ಬೆಂಬಲಿಸುತ್ತೇನೆ.
ಚುನಾವಣಾ ಆಯೋಗದ ಸ್ವಾಯತ್ತತೆ ಮತ್ತು ಸಂವಿಧಾನಬದ್ಧ ಕರ್ತವ್ಯಗಳ ಕುರಿತು ಗಂಭೀರ ಪ್ರಶ್ನೆಗಳು ಎದ್ದಿರುವ ಸಂದರ್ಭದಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರನ್ನು ಕೂಡಲೇ ವಜಾಗೊಳಿಸಬೇಕು ಹಾಗೂ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ. ಕೇಂದ್ರ ಚುನಾವಣಾ ಆಯೋಗ ಮುಖ್ಯ ಆಯುಕ್ತರ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದೆ.

Related Articles

Leave a Reply

Your email address will not be published. Required fields are marked *

Back to top button