ಜ್ಞಾನೇಶ್ ಕುಮಾರ್ ಅಮಾನತು ಕೋರಿ ಅರ್ಜಿ- ವಿಚಾರಣೆಗೆ ಸುಪ್ರೀಂ ಸಮ್ಮತಿ

ಆದರೆ ವಿಚಾರಣೆಗೆ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಿಲ್ಲ.

ಸ್ನೇಹಜೀವಿ ನ್ಯೂಸ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಉಳಿದ ಇಬ್ಬರು ಚುನಾವಣಾ ಆಯುಕ್ತರ ಸಲಹೆಗಳನ್ನು ಕಡೆಗಣಿಸಿ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂಬ ಮಾಧ್ಯಮ ವರದಿಯ ಹಿನ್ನೆಲೆಯಲ್ಲಿ ಅಮಾನತುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.
       ಅರ್ಜಿದಾರ ರಾಕೇಶ್ ಕುಮಾರ್ ಸಿಂಗ್ ಪರವಾಗಿ ಹಾಜರಾದ ಹಿರಿಯ ವಕೀಲ ವಿಕಾಸ್ ಸಿಂಗ್ ಅವರು ವಿಷಯವನ್ನು ಪ್ರಸ್ತಾಪಿಸಿ ತುರ್ತು ವಿಚಾರಣೆಗೆ ಕೋರಿದರು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಅರ್ಜಿಯನ್ನು ಪಟ್ಟಿ ಮಾಡಲು ಒಪ್ಪಿಗೆ ಸೂಚಿಸಿದರು. ಆದರೆ ವಿಚಾರಣೆಗೆ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಿಲ್ಲ.
    ಚುನಾವಣಾ ಆಯೋಗದ ವ್ಯಾಪ್ತಿಗೆ ಬರುವ ಯಾವುದೇ ನಿರ್ಧಾರಗಳನ್ನು ಸಿಇಸಿ ಏಕಪಕ್ಷೀಯವಾಗಿ ತೆಗೆದುಕೊಳ್ಳುವಂತಿಲ್ಲ ಎಂದು ಘೋಷಿಸಬೇಕೆಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲಾಗಿದೆ. ಬಹು-ಸದಸ್ಯ ಆಯೋಗದ ಉದ್ದೇಶವೇ ಸರ್ವಾನುಮತ ಅಥವಾ ಬಹುಮತದ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳುವುದಾಗಿದೆ. ಆದರೆ ಈ ಬೃಹತ್ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಪೂರ್ಣ ಆಯೋಗದ ಅನುಮೋದನೆ ಇದೆಯೇ ಎಂಬ ಬಗ್ಗೆ ಗಂಭೀರ ಸಂಶಯಗಳಿವೆ ಎಂದು ವಕೀಲ ವಿಕಾಸ್ ಸಿಂಗ್ ನ್ಯಾಯಪೀಠದ ಮುಂದೆ ವಾದಿಸಿದರು.

Related Articles

Leave a Reply

Your email address will not be published. Required fields are marked *

Back to top button