ವಾಹನ ನಿಲುಗಡೆ ಸ್ಥಳ ಮತ್ತು ಕಿರಿದಾದ ರಸ್ತೆಗಳಲ್ಲಿ ಪಟಾಕಿ ಸಿಡಿಸದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ವಹಿಸಬೇಕು

ದೀಪಾವಳಿಗೆ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ! ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆಯ ಗೈಡ್‌ಲೈನ್ಸ್‌ ...!

ಸ್ನೇಹಜೀವಿ ನ್ಯೂಸ್

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಸುರಕ್ಷತಾ ಮಾರ್ಗಸೂಚಿ ಅನ್ವಯಗೊಳಿಸುವಂತೆ ಸೂಚಿಸಲಾಗಿದೆ. ಪಟಾಕಿ ಸಿಡಿಸುವಾಗ ವಿದ್ಯಾರ್ಥಿಗಳು ಕಡ್ಡಾಯವಾಗಿ ಸುರಕ್ಷತಾ ಕ್ರಮ ಪಾಲಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
  ಶಿಕ್ಷಣ ಇಲಾಖೆ ಮಾರ್ಗಸೂಚಿಗಳೇನು?: ಪಟಾಕಿಗಳಿಗಿಂತ ದೀಪಗಳು ಮತ್ತು ಪರಿಸರ ಸ್ನೇಹಿ ಅಲಂಕಾರಗಳಿಗೆ ಆದ್ಯತೆ ನೀಡಲು ಸಲಹೆ ನೀಡಿರುವ ಶಿಕ್ಷಣ ಇಲಾಖೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಉಂಟುಮಾಡುವ ಪಟಾಕಿಗಳ ಬಳಕೆಗೆ ಕಡಿವಾಣ ಹಾಕಲು ಸೂಚನೆ ನೀಡಿದೆ. ಪಟಾಕಿಗಳನ್ನು ಸುರಕ್ಷಿತ ಸ್ಥಳದಲ್ಲಿ ಮಾತ್ರ ಸಂಗ್ರಹಿಸಬೇಕು. ಜೇಬಿನಲ್ಲಿ ಪಟಾಕಿ ಇಟ್ಟುಕೊಳ್ಳದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ವಹಿಸಬೇಕು. ಬೆಂಕಿಯ ಮೂಲಗಳ ಸಮೀಪ ಪಟಾಕಿ ಸಂಗ್ರಹಿಸದಂತೆ ಸೂಚಿಸಲಾಗಿದೆ.
ಪಟಾಕಿ ಸಿಡಿಸುವಾಗ ಸುರಕ್ಷಿತ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ, ಕೈಯಲ್ಲಿ ಹಿಡಿದು ಪಟಾಕಿ ಸಿಡಿಸಬಾರದು. ಮುಖ, ಕಣ್ಣು ಮತ್ತು ಕೈಗಳನ್ನು ಪಟಾಕಿಯ ಸಮೀಪ ತೆಗೆದುಕೊಂಡು ಹೋಗಬಾರದು. ಪೋಷಕರು ಅಥವಾ ವಯಸ್ಕರ ನೇರ ಮೇಲ್ವಿಚಾರಣೆಯಲ್ಲೇ ಪಟಾಕಿ ಸಿಡಿಸಬೇಕು ಮನೆಯ ಒಳಭಾಗ,ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

Related Articles

Leave a Reply

Your email address will not be published. Required fields are marked *

Back to top button